ತುಮಕೂರು, ಆಗಸ್ಟ್ 6, 2025: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಿರುವ ಸಮೃದ್ಧಿ ಶಿಕ್ಷಣ ಟ್ರಸ್ಟ್ ವತಿಯಿಂದ ಇಂದು ಹರಳೂರಿನ ಶ್ರೀ ವೀರಭದ್ರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಪತ್ರಿಕೆ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ‘ಪ್ರಜಾವಾಣಿ’ ಪತ್ರಿಕೆಯ ‘ಉದ್ಯೋಗ ವಿದ್ಯಾರ್ಥಿ ಮಿತ್ರ’ ಪತ್ರಿಕೆಯನ್ನು ಒಂದು ವರ್ಷದವರೆಗೆ ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್. ಗುರುಮೂರ್ತಿ ಮಾತನಾಡಿ, “ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಇಂತಹ ಉಪಕ್ರಮಗಳು ಅತ್ಯಂತ ಸಹಕಾರಿ. ಈ ಪತ್ರಿಕೆಗಳು ವಿದ್ಯಾರ್ಥಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಉನ್ನತ ಶಿಕ್ಷಣ ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುತ್ತವೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮೃದ್ಧಿ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷರಾದ ಬೆಳಗುಂಬ ವೆಂಕಟೇಶ್, ಉಪಾಧ್ಯಕ್ಷರಾದ ಯಲ್ಲಾಪುರ ನಂಜುಂಡಯ್ಯ, ಕಾರ್ಯದರ್ಶಿ ಬೈರಸಂದ್ರ ಹರೀಶ್, ಹೆಬ್ಬಾಕ ಕುಮಾರ್, ತೊಂಡಗೆರೆ ಸುನಿಲ್ ಉಪಸ್ಥಿತರಿದ್ದರು. ಅಲ್ಲದೆ, ತುಮಕೂರು ಜಿಲ್ಲಾ ಪ್ರಜಾವಾಣಿ ವರದಿಗಾರರಾದ ಮರಿಯಪ್ಪ ಮತ್ತು ಸಂದೀಪ್ ಸಹ ಹಾಜರಿದ್ದರು. ಶಾಲೆಯ ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಈ ವಿತರಣಾ ಕಾರ್ಯವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬುವಲ್ಲಿ ಯಶಸ್ವಿಯಾಯಿತು.