ತುಮಕೂರು, ಜುಲೈ 10, 2025: ಸಮೃದ್ಧಿ ಶಿಕ್ಷಣ ಟ್ರಸ್ಟ್ (ರಿ.) ವತಿಯಿಂದ ಸಮಾಜಮುಖಿ ಕಾರ್ಯಗಳು ಮುಂದುವರೆದಿದ್ದು, ಇಂದು ಹೆಬ್ಬೂರು ಹೋಬಳಿಯ ತೊಂಡಿಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿ ಉದ್ಯೋಗ ಮಿತ್ರ’ ಸಂಯುಕ್ತ ಕರ್ನಾಟಕ ಪತ್ರಿಕೆಯನ್ನು ವಿತರಿಸಲಾಯಿತು. ಸುಮಾರು 45 ವಿದ್ಯಾರ್ಥಿಗಳಿಗೆ ಒಂದು ವರ್ಷದ ಅವಧಿಗೆ ಈ ಪತ್ರಿಕೆಯನ್ನು ಉಚಿತವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಮೃದ್ಧಿ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷರಾದ ಬೆಳಗುಂಬ ವೆಂಕಟೇಶ್ ರವರು ಮಾತನಾಡಿ, “ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಗೆ ಮತ್ತು ಭವಿಷ್ಯದ ವೃತ್ತಿ ಅವಕಾಶಗಳ ಬಗ್ಗೆ ಮಾಹಿತಿ ಪಡೆಯಲು ಈ ಪತ್ರಿಕೆಗಳು ಅತ್ಯಂತ ಸಹಾಯಕವಾಗಿವೆ. ಅವರ ಶೈಕ್ಷಣಿಕ ಪ್ರಗತಿಗೆ ಬೆಂಬಲ ನೀಡುವುದು ನಮ್ಮ ಟ್ರಸ್ಟ್‌ನ ಪ್ರಮುಖ ಗುರಿಯಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮೃದ್ಧಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಹರೀಶ್, ಟ್ರಸ್ಟಿಗಳಾದ ವಡ್ಡರಹಳ್ಳಿ ನರಸಿಂಹರಾಜು, ಹೆಬ್ಬಾಕ ಕುಮಾರ್, ತೊಂಡಿಗೆರೆ ಸುನಿಲ್, ನಾಗವಲ್ಲಿ ಜನಾರ್ಧನ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಗ್ರಾಮಸ್ಥರಾದ ಟಿ.ಡಿ. ರಾಜಣ್ಣ, ಟಿ.ಡಿ. ವೆಂಕಟಪ್ಪ, ಅರ್ಚಕ ರಾಜಣ್ಣ ಮತ್ತು ಇತರೆ ಗಣ್ಯರು, ಹಾಗೂ ಮಾಧ್ಯಮ ಮಿತ್ರರು ಸಹ ಈ ಸಂದರ್ಭದಲ್ಲಿ ಹಾಜರಿದ್ದರು. ಟ್ರಸ್ಟ್‌ನ ಈ ಉಪಕ್ರಮಕ್ಕೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.